ಕರ್ನಾಟಕ

karnataka

ETV Bharat / city

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಕಿಚ್ಚ ಸುದೀಪ್ - ಸುದೀಪ್ ವಿಕ್ರಾಂತ್ ರೋಣ

ಕುಟುಂಬ ಸಮೇತ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಿಚ್ಚ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು..

sudeep-visited-kukke-subramanya-temple
ನಟ ಕಿಚ್ಚ ಸುದೀಪ್

By

Published : Dec 11, 2021, 4:35 PM IST

ಸುಬ್ರಹ್ಮಣ್ಯ :ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಕಿಚ್ಚ ಸುದೀಪ್..

ಕುಕ್ಕೆಗೆ ಸುದೀಪ್​ ಕುಟುಂಬದ ಭೇಟಿ :ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು.

ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.

ಓದಿ-ಕಿಚ್ಚನ ಅಭಿಮಾನಿಗಳಿಗೆ ಸಿಹಿ ಸುದ್ದಿ: ವಿಕ್ರಾಂತ್​ ರೋಣ ಬಿಡುಗಡೆಗೆ ಮುಹೂರ್ತ ಫಿಕ್ಸ್​

ಸದ್ಯ ಟೈಟಲ್ ಹಾಗೂ ಟೀಸರ್​ನಿಂದಲೇ ಸುದೀಪ್ ವಿಕ್ರಾಂತ್ ರೋಣ ಭಾರತೀಯ ಚಿತ್ರರಂಗದಲ್ಲಿ ಭಾರೀ ಹೈಪ್ ಕ್ರಿಯೇಟ್​ ಮಾಡಿದೆ. ಮುಂದಿನ ವರ್ಷ ಫೆಬ್ರವರಿ 24ರಂದು ದೇಶಾದ್ಯಂತ ಚಿತ್ರ ತೆರೆಗೆ ಬರಲಿದೆ.

ABOUT THE AUTHOR

...view details