ಕರ್ನಾಟಕ

karnataka

ETV Bharat / city

ಸುಳ್ಯ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಸುಳ್ಯದ ಸಂಪಾಜೆಯ ಚಟ್ಟೆಕಲ್ಲಿನಲ್ಲಿ ಅಂಬರೀಶ್ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 71.52 ಗ್ರಾಂ ಚಿನ್ನಾಭರಣಗಳು ಮತ್ತು 11590 ರೂಪಾಯಿ ನಗದು ವಶಪಡಿಸಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

sulya-robbery-case-two-accused-arrested
ಸುಳ್ಯ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

By

Published : Apr 7, 2022, 11:15 AM IST

ಸುಳ್ಯ (ದಕ್ಷಿಣ ಕನ್ನಡ): ಸುಳ್ಯದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್​ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 71.52 ಗ್ರಾಂ ಚಿನ್ನಾಭರಣಗಳು ಮತ್ತು 11,590 ರೂಪಾಯಿ ನಗದು ವಶಪಡಿಸಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ KA 03, AB 1883 ಮತ್ತು TN 73F 8445 ನಂಬರಿನ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಮಾರ್ಚ್ 20 ರಂದು ರಾತ್ರಿ ವೇಳೆಯಲ್ಲಿ ಅಂಬರೀಶ್ ಎಂಬವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮನೆಯಲ್ಲಿದ್ದ ಸುಮಾರು 1,52,000 ರೂ. ನಗದು ಮತ್ತು ಸುಮಾರು 83 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಸೋನಾವನೆ ಋಷಿಕೇಶ್‌ ಭಗವಾನ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಕುಮಾರಚಂದ್ರ ಸೂಚನೆಯಂತೆ ಡಿವೈಎಸ್ಪಿ ಕು.ಗಾನಾ ಪಿ. ಕುಮಾರ್‌, ನವೀನ್‌ ಚಂದ್ರ ಜೋಗಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾರ್ತಿಕ್, ಯಧುಕುಮಾರ್, ದೀಕ್ಷಿತ್ ಕೆ.ಎನ್, ಬಿ.ನರಸಿಂಹನ್, ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ಪ್ರಕರಣದ ಉಳಿದ ಆರೋಪಿಗಳಾದ ತಮಿಳುನಾಡಿನ ಸೆಂಥಿಲ್ ಹಾಗೂ ಪಾಂಡಿಸೆಲ್ವಂ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಆರೋಪಿಗಳಿಂದ 20ಸಾವಿರ ರೂ. ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎರಡು ವಾಹನ ಮತ್ತು 5 ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಓದಿ :ಪ್ರೇಯಸಿಗೆ ಖರ್ಚು ಮಾಡಲು ಒಡವೆ ಕದ್ದ.. ಸಿಸಿಟಿವಿಯಿಂದ ಸಿಕ್ಕಿಬಿದ್ದ

For All Latest Updates

ABOUT THE AUTHOR

...view details