ಮಂಗಳೂರು: ಕಾನೂನಿನ ಮುಂದೆ ಎಲ್ಲರೂ ಸಮಾನರು. ಹಾಗಾಗಿ ಯಾರಾದ್ರು ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ರೆ ಖಂಡಿತ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷ ಹೇಳಿದರು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಡೀಲ್ ಕ್ರಾಸ್ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ. ಹಾಗೂ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ, ಶಬ್ದ ಮಾಲಿನ್ಯ, ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ತೊಂದರೆ ಉಂಟಾಗುತ್ತಿದ್ದು, ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.