ಮಂಗಳೂರು:ಶ್ರೀಲಂಕಾದಿಂದ ಕೆನಡಾಗೆ ಮಾನವ ಕಳ್ಳಸಾಗಾಣಿಕೆ ನಡೆಯುತ್ತಿದ್ದ ಪ್ರಕರಣದಲ್ಲಿ ಮಂಗಳೂರಿನಲ್ಲಿ ಶುಕ್ರವಾರ 38 ಮಂದಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ತಮಿಳುನಾಡು ಪೊಲೀಸ್ ತಂಡ ಮಂಗಳೂರಿಗೆ ಆಗಮಿಸಿದೆ. ಈ ಬಗ್ಗೆ ಈಟಿವಿ ಭಾರತದ ಜೊತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್, ತಮಿಳುನಾಡಿನಲ್ಲಿ ಕೂಡ ಇಂತಹದೇ ಪ್ರಕರಣ ಬಯಲಿಗೆ ಬಂದಿರುವುದರಿಂದ ತಮಿಳುನಾಡಿನ ಪೊಲೀಸ್ ತಂಡ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ಮಂಗಳೂರಿಗೆ ಬಂದಿದೆ.
ಪ್ರಕರಣದ ಬಗ್ಗೆ ಕೇಂದ್ರ ಸಚಿವಾಲಯಕ್ಕೆ ಮಾಹಿತಿ ನೀಡಲಾಗುವುದು. ಬಳಿಕ ರಾಯಭಾರಿ ಕಚೇರಿಯ ಮೂಲಕ ಪ್ರಕ್ರಿಯೆ ನಡೆಯಲಿದೆ. ಬಂಧಿತ 38 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆಗಾಗಿ ನಾಲ್ಕು ಮಂದಿಯನ್ನು ಪೊಲೀಸ್ ಕಸ್ಟಡಿಗೆ ಕೇಳಿದ್ದು, ಸೋಮವಾರ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ;ಅನಾರೋಗ್ಯಕ್ಕೊಳಗಾದ ವೃದ್ಧೆ: 5 ಕಿ.ಮೀ.ವರೆಗೆ ಜೋಲಿಯಲ್ಲಿ ಹೊತ್ತು ಆಸ್ಪತ್ರೆ ಸೇರಿಸಿದ ಯುವಕರು!