ಮಂಗಳೂರು:ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಲ್ಲಿ ಇರುವ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲೀಕರು ಹಾಗೂ ಶಿಕ್ಷಕಿ ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಹರಿಣಾಕ್ಷಿ ಮೃತಪಟ್ಟವರು. ಇವರಿಗೆ 50 ವರ್ಷ ವಯಸ್ಸಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶುಕ್ರವಾರ ಬೆಳಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪ ಹುಡುಕಾಡಿ ಬಳಿಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನದ ವೇಳೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಇವರ ಪಾದರಕ್ಷೆಗಳು ಪತ್ತೆಯಾಗಿದ್ದವು. ನಂತರ ಅಲ್ಲೇ ಇದ್ದ ಬಾವಿಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಮೂಲಕ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸುಮಾರು 30 ಅಡಿ ಅಳದ ಬಾವಿಯಿಂದ ಮೃತದೇಹ ಮೇಲೆತ್ತಲಾಗಿದೆ.