ಮಂಗಳೂರು:ಮುಂಗಾರು ಮಳೆಯ ಆಗಮನದ ಜೊತೆಗೆ ಕರಾವಳಿಯ ಪ್ರಮುಖ ವಹಿವಾಟಾದ ಮೀನುಗಾರಿಕೆ ವ್ಯವಹಾರ ತಾತ್ಕಾಲಿಕ ಸ್ತಬ್ಥವಾಗಲಿದೆ. ಪ್ರತಿ ವರ್ಷದಂತೆ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕೆಗೆ ಎರಡು ತಿಂಗಳ ನಿಷೇಧ ಹೇರಲಾಗುತ್ತದೆ.
ಮುಂಗಾರು ಮಳೆಯ ಆರಂಭದ ಸಂದರ್ಭದಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ಮೀನುಗಾರಿಕೆ ಮಾಡಿದರೆ ಮೀನುಗಳ ಸಂತತಿ ವೃದ್ಧಿಯಾಗುವುದಿಲ್ಲ. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರಿಕೆಗೆ ತೆರಳುವುದು ಅಪಾಯ. ಈ ಹಿನ್ನೆಲೆಯಲ್ಲಿ ಹಿಂದಿನಿಂದಲೂ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೆ ತೆರಳುವುದಿಲ್ಲ.