ದಕ್ಷಿಣ ಕನ್ನಡ: ಸುಳ್ಯ ತಾಲೂಕು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ಸೆಕ್ಷನ್ 21(1) ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಚೆನ್ನಕೇಶವ ದೇವಾಲಯದ ಕಾಲಾವಧಿ ಉತ್ಸವ ಹಿನ್ನೆಲೆ ಮದ್ಯ ಮಾರಾಟ ಬಂದ್ - ಚೆನ್ನಕೇಶವ ದೇವಾಲಯದ ಕಾಲಾವಧಿ ಉತ್ಸವ ಹಿನ್ನೆಲೆ ಮದ್ಯ ಮಾರಾಟ ಬಂದ್
ಸುಳ್ಯ ತಾಲೂಕು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ಸೆಕ್ಷನ್ 21(1) ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ಅಡಿ, ಸೆಕ್ಷನ್ 21(1) ಜಾರಿ ಮಾಡಿ, ಮದ್ಯಮುಕ್ತ ಪ್ರದೇಶ ಎಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಿಂಧೂ ಬಿ. ರೂಪೇಶ್ ರವರು ಆದೇಶ ಹೊರಡಿಸಿದ್ದಾರೆ.
ಸುಳ್ಯ ಜಾತ್ರೆಯ ಪ್ರಯುಕ್ತ ಸುಳ್ಯ ನಗರ, ಕಸಬ ಮತ್ತು ಆಲೆಟ್ಟಿ ಪ್ರದೇಶಗಳನ್ನು ಮದ್ಯ ಮುಕ್ತ ಪ್ರದೇಶವೆಂದು ಘೋಷಿಸಲಾಗಿದೆ. ಸುಳ್ಯದಲ್ಲಿರುವ ಬಾರ್ ಮತ್ತು ವೈನ್ ಶಾಪ್ ಮತ್ತು ಸರ್ಕಾರಿ ಮದ್ಯ ಮಾರಾಟ ಮಳಿಗೆಗಳನ್ನು ಜನವರಿ 11 ರಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 11.30 ರವರೆಗೆ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ಸಿಂಧೂ ಬಿ ರೂಪೇಶ್ ರವರು ಮಾಹಿತಿ ನೀಡಿದ್ದಾರೆ.