ಮಂಗಳೂರು: ಮೈಸೂರು ದೇವಸ್ಥಾನದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಮಹಾಸಭಾದ ನಾಲ್ವರು ಮುಖಂಡರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಶನಿವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ ಅವರು ಗಾಂಧೀಜಿಯನ್ನು ಬಿಡಲಿಲ್ಲ, ಹಿಂದೂ ವಿರೋಧಿ ಯಾಗಿದ್ದಕ್ಕೆ ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡ್ತೇವಾ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ಮೂಲಕ ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮತ್ತೊಂದು ಗುಂಪಿನ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ ಎಂಬುವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.