ಕರ್ನಾಟಕ

karnataka

ETV Bharat / city

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್​: ಮೂರು ಹಂತಗಳಲ್ಲಿ ತಪಾಸಣೆ - undefined

ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ‌ಕೇಂದ್ರದ ಆವರಣದಲ್ಲಿ ಬಂದೋಬಸ್ತ್​ ವ್ಯವಸ್ಥೆ ಕೈಗೊಳ್ಳುವ ದೃಷ್ಟಿಯಿಂದ 3 ಹಂತಗಳ ತಪಾಸಣೆ ನಡೆಸಲಾಗುವುದು. ಮೊದಲ ಹಂತದಲ್ಲಿ ವಾಹನಗಳಿಗೆ ನಿರ್ಬಂಧ, ಎರಡನೇ ಹಂತದಲ್ಲಿ‌ ಮಾಧ್ಯಮದ ಪ್ರತಿನಿಧಿಗಳನ್ನು ಹೊರತುಪಡಿಸಿ, ಬೇರೆ ಯಾವ ವ್ಯಕ್ತಿಗಳಿಗೂ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲದಂತೆ ನಿರ್ಬಂಧ ಹೇರಲಾಗಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್

By

Published : May 22, 2019, 6:12 PM IST

ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಸರ್ವ ಸಿದ್ಧತೆಗಳನ್ನು ಮಾಡಲಾಗಿದ್ದು, ಮತ ಎಣಿಕೆ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ಒದಗಿಸಲಾಗಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್

ಹೌದು, ಸುರತ್ಕಲ್ ಎನ್​ಐಟಿಕೆ ಮತ ಎಣಿಕೆ ‌ಕೇಂದ್ರದ ಆವರಣದಲ್ಲಿ ಬಂದೋಬಸ್ತ್​ ವ್ಯವಸ್ಥೆ ಕೈಗೊಳ್ಳುವ ದೃಷ್ಟಿಯಿಂದ 3 ಹಂತಗಳ ತಪಾಸಣೆ ನಡೆಸಲಾಗುವುದು. ಮೊದಲ ಹಂತದಲ್ಲಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುವುದು.‌ ಎರಡನೇ ಹಂತದಲ್ಲಿ‌ ಮಾಧ್ಯಮದ ಪ್ರತಿನಿಧಿಗಳನ್ನು ಹೊರತುಪಡಿಸಿ, ಬೇರೆ ಯಾವ ವ್ಯಕ್ತಿಗಳಿಗೂ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲದಂತೆ ನಿರ್ಬಂಧ ಹೇರಲಾಗಿದೆ.

ಇನ್ನು ಪಾಸ್ ಹೊಂದಿರುವ ಅಧಿಕಾರಿಗಳು, ಸಿಬ್ಬಂದಿ, ಮತ ಎಣಿಕೆ ಏಜೆಂಟ್, ಅಭ್ಯರ್ಥಿ, ಮಾಧ್ಯಮ ವೃಂದದವರಿಗೆ ಮೂರು ಹಂತಗಳಲ್ಲಿ ತಪಾಸಣೆ ನಡೆಸಿದ ಬಳಿಕ ಸಂಬಂಧಿಸಿದವರನ್ನು ಮತ ಎಣಿಕೆ ಕೇಂದ್ರದ ಒಳಗೆ ಬಿಡಲಾಗುತ್ತದೆ ಎಂದು ತಿಳಿದು ಬಂದಿದೆ.

For All Latest Updates

TAGGED:

ABOUT THE AUTHOR

...view details