ಕರ್ನಾಟಕ

karnataka

ETV Bharat / city

ಮಂಗಳೂರು: ಅಯೋಧ್ಯೆಯಲ್ಲಿ ಕರಸೇವಕರಾಗಿ ಪಾಲ್ಗೊಂಡವರಿಗೆ ಸನ್ಮಾನ - ಮಂಗಳೂರು ಸುದ್ದಿ

ದೇಶವನ್ನು ಪೂಜಿಸುವ, ತಾಯಿ ಭಾರತಿಯನ್ನು ಆರಾಧನೆ ಮಾಡುವ ರಾಷ್ಟ್ರದ ಜನರಿಗೆ ಆಗಸ್ಟ್​ 15 ಸ್ವಾತಂತ್ರ್ಯ ದಿನವಾಗಿ ಎಷ್ಟು ಪವಿತ್ರವೋ ಅಷ್ಟೇ ಪವಿತ್ರ ಆಗಸ್ಟ್​ 5 ಆಗಿದೆ. ಕರಸೇವಕರಾಗಿ ಕರ್ತವ್ಯ ನಿರ್ವಹಿಸಿದವರಿಗೆ ಇಂದು ರಾಮನ ಸ್ವಾತಂತ್ರ್ಯ ದಿನ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Nalin Kumar Kateel
ನಳಿನ್ ಕುಮಾರ್ ಕಟೀಲ್

By

Published : Aug 5, 2020, 3:14 PM IST

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದ ಈ ದಿನ, ರಾಮನ ಸ್ವಾತಂತ್ರ್ಯ ದಿನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ, ಅಯೋಧ್ಯೆಯಲ್ಲಿ ಕರಸೇವಕರಾಗಿ ಪಾಲ್ಗೊಂಡವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದೇಶವನ್ನು ಪೂಜಿಸುವ, ತಾಯಿ ಭಾರತಿಯನ್ನು ಆರಾಧನೆ ಮಾಡುವ ರಾಷ್ಟ್ರದ ಜನರಿಗೆ ಆಗಸ್ಟ್​ 15 ಸ್ವಾತಂತ್ರ್ಯ ದಿನವಾಗಿ ಎಷ್ಟು ಪವಿತ್ರವೋ ಅಷ್ಟೇ ಪವಿತ್ರ ಆಗಸ್ಟ್​ 5 ಆಗಿದೆ. ಕರಸೇವಕರಾಗಿ ಕರ್ತವ್ಯ ನಿರ್ವಹಿಸಿದವರಿಗೆ ಇಂದು ರಾಮನ ಸ್ವಾತಂತ್ರ್ಯ ದಿನ ಎಂದು ಅವರು ಹೇಳಿದರು.

ಇಂದು ಐತಿಹಾಸಿಕ ದಿನವಾಗಿದ್ದು ನಮ್ಮ ಜೀವನ ಪಾವನವಾಗಿದೆ. ನಮ್ಮ ಜೀವನದ ಅತಿ ಪುಣ್ಯ ದಿನ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ 1991 ಮತ್ತು 1992 ರಲ್ಲಿ ಕರಸೇವಕರಾಗಿ ಅಯೋಧ್ಯೆಗೆ ಹೋಗಿದ್ದ ಮಾಜಿ ಶಾಸಕ ಯೋಗಿಶ್ ಭಟ್, ವಿಹಿಂಪ ರಾಜ್ಯ ಮುಖಂಡ ಎಂ.ಬಿ.ಪುರಾಣಿಕ್ ಸೇರಿದಂತೆ ಹಲವು ಮಂದಿಯನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪ್​ವೆಲ್ ಮೊದಲಾದವರು ಉಪಸ್ಥಿತರಿದ್ದರು.

ABOUT THE AUTHOR

...view details