ಮಂಗಳೂರು:ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ. ನಾಳೆ ಕೂಡ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ಇರಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 3ರವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಾಳೆ ಕೂಡ ದ.ಕ. ಜಿಲ್ಲೆ ಸಂಪೂರ್ಣ ಬಂದ್: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಎಲ್ಲೆಡೆ ಬಂದ್ ಇರುವ ಕಾರಣ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಈವರೆಗೆ ಸುಮಾರು 1,500 ಅಧಿಕ ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ. ಅಲ್ಲದೆ ಮಂಗಳೂರಲ್ಲಿ ಇಂದಿರಾ ಕ್ಯಾಂಟೀನ್ ನಿಂದ ಆಹಾರ ಸರಬರಾಜು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಖರೀದಿಸಬಹುದು. ಆದರೆ ಕುಟುಂಬದಿಂದ ಒಬ್ಬರು ಮಾತ್ರ ಆಗಮಿಸಬೇಕು ಎಂದು ತಿಳಿಸಿದರು
ಎರಡು ದಿನ ಜಿಲ್ಲೆಯಲ್ಲಿ ಕಡ್ಡಾಯ ಬಂದ್ಗೆ ಬೆಂಬಲ ನೀಡಿರುವ ಸಾರ್ವಜನಿಕರು ನಾಳೆ ಸಹ ಬೆಂಬಲ ನೀಡಬೇಕು. ವ್ಯಾಪಾರಿಗಳು ನಿಗದಿತ ದರದಲ್ಲೇ ಆಹಾರ ಸಾಮಗ್ರಿಗಳನ್ನು ಕೊಡಬೇಕು. ದರ ಹೆಚ್ಚು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
Last Updated : Mar 29, 2020, 8:06 PM IST