ಕರ್ನಾಟಕ

karnataka

ETV Bharat / city

ವಿವಿಧ ವಿಶ್ವ ವಿದ್ಯಾಲಯಗಳ ಘಟಿಕೋತ್ಸವಕ್ಕೆ ಉಪರಾಷ್ಟ್ರಪತಿ ಭೇಟಿ - Naydu in JSS medical college

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮಂಗಳೂರಿನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್ಐಟಿಕೆ) ದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಭಾಗಿಯಾಗಿ ಅಲ್ಲಿಂದ  4.30ಕ್ಕೆ ಮೈಸೂರಿನ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಆಕಾಡೆಮಿಯ ಹತ್ತನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

By

Published : Nov 1, 2019, 2:10 PM IST

ಮೈಸೂರು/ ಮಂಗಳೂರು :ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮಂಗಳೂರಿನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್ಐಟಿಕೆ) ದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಭಾಗಿಯಾಗಿ ಅಲ್ಲಿಂದ 4.30 ಕ್ಕೆ ಮೈಸೂರಿನ ಜೆ.ಎಸ್.ಎಸ್. ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹತ್ತನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಎಂಟೆಕ್ , ಎಂಸಿಎ, ಎಂಬಿಎ, ಎಂಎಸ್ಸಿ ಮತ್ತು 2018-19 ನೇ ಸಾಲಿನಲ್ಲಿ ಪಿಎಚ್​​ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.

ಉಪ ರಾಷ್ಟ್ರಪತಿಗಳು ಶೈಕ್ಷಣಿಕ ಸಾಧನೆ ಮಾಡಿದ ಪದವೀಧರರಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ವಿತರಿಸಿ ಘಟಿಕೋತ್ಸವ ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ ಸಂಜೆ ನಗರದ ಸರ್ಕಾರಿ ಭವನದಲ್ಲಿ ವಾಸ್ತವ್ಯ ಹೂಡಿ ನವೆಂಬರ್ 3 ರಂದು ಬೆಂಗಳೂರಿಗೆ ತೆರಳಲಿದ್ದಾರೆ.

ABOUT THE AUTHOR

...view details