ಕರ್ನಾಟಕ

karnataka

ETV Bharat / city

ವೆನ್ಲಾಕ್ ಆಸ್ಪತ್ರೆಯ ಡಯಾಲಿಸಿಸ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ - ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ

ವೆನ್ಲಾಕ್​ ಆಸ್ಪತ್ರೆ ಕೋವಿಡ್ 19 ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವುದರಿಂದ ಆಸ್ಪತ್ರೆಗೆ ಡಯಾಲಿಸಿಸ್ ಚಿಕಿತ್ಸೆಗೆ ಬರುತ್ತಿದ್ದ ರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಮಾಲೀಕರು ಒಪ್ಪಿದ್ದಾರೆ.

Treatment of Wenlock Hospital Dialysis Patients in a Private Hospital
ವೆನ್ಲಾಕ್ ಆಸ್ಪತ್ರೆಯ ಡಯಾಲಿಸಿಸ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

By

Published : Mar 30, 2020, 8:06 PM IST

ಮಂಗಳೂರು:ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯನ್ನ ಕೋವಿಡ್ 19 ಆಸ್ಪತ್ರೆಯಾಗಿ ಮಾರ್ಪಾಡು ಮಾಡಿದ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ಪಡೆಯುವ ಬಗ್ಗೆ ಉಂಟಾದ ಗೊಂದಲಕ್ಕೆ ತೆರೆ ಬಿದ್ದಿದೆ.

ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆಯಲ್ಲಿ ಈ ಸಮಸ್ಯೆ ಗೆ ಪರಿಹಾರ ಕಂಡುಕೊಳ್ಳಲಾಗಿದೆ. ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೆನ್ಲಾಕ್​ ಆಸ್ಪತ್ರೆ ಕೋವಿಡ್ 19 ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವುದರಿಂದ ಆಸ್ಪತ್ರೆಗೆ ಡಯಾಲಿಸಿಸ್ ಚಿಕಿತ್ಸೆಗೆ ಬರುತ್ತಿದ್ದ ರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಮಾಲೀಕರು ಒಪ್ಪಿದ್ದಾರೆ.

ಅನಿವಾರ್ಯವಾದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ನೀಡಲು ಒಪ್ಪಿದ್ದಾರೆ.

ABOUT THE AUTHOR

...view details