ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಅನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಸೈಗೋಳಿಯ ಶರಣ್ (24), ಹರೇಕಳದ ಸುಜಿತ್ (26) ಬಂಧಿತ ಆರೋಪಿಗಳು.
ಮಂಗಳೂರಿನಲ್ಲಿ ಅಂಬೇಡ್ಕರ್ ಫ್ಲೆಕ್ಸ್ಗೆ ಹಾನಿ: ಇಬ್ಬರ ಬಂಧನ!
ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಅಂಬೇಡ್ಕರ್ ಫ್ಲೆಕ್ಸ್ ಹಾನಿ ಪ್ರಕರಣದ ಆರೋಪಿಗಳು ಅರೆಸ್ಟ್
ಇದನ್ನೂ ಓದಿ:ಶ್ರೀರಾಮುಲು ಮನೆ ಬಳಿ ಸಾರಿಗೆ ನೌಕರರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ: ಅಧ್ಯಕ್ಷ ಚಂದ್ರಶೇಖರ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಿರುವ ದಕ್ಷಿಣಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಸಂಘಟನೆಯು ಮಂಗಳೂರಿನ ಅಸೈಗೋಳಿಯಲ್ಲಿ ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್ ಅನ್ನು ಹರಿದು ಹಾನಿ ಮಾಡಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.