ಮಂಗಳೂರು:ನಗರದ ಉರ್ವ ಚರ್ಚ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಜಗಳ ನಡೆದಿದ್ದು, ಒಬ್ಬಾತ ಇನ್ನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಉರ್ವ ಚರ್ಚ್ ಬಳಿ ಯುವಕನಿಗೆ ಚೂರಿ ಇರಿತ: ಇಬ್ಬರ ಆರೋಪಿಗಳ ಬಂಧನ -
ಉರ್ವ ಚರ್ಚ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕ ಗಾಯಗೊಂಡಿದ್ದಾನೆ.
ಬಂಧಿತ ಆರೋಪಿಗಳು
ಸ್ಥಳೀಯ ನಿವಾಸಿ ರಿತೇಶ್ (23) ಚೂರಿ ಇರಿತದಿಂದ ಗಾಯಗೊಂಡ ಯುವಕ. ಆರೋಪಿಗಳಾದ ಆಶೀಶ್, ತ್ರಿಶೂಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ವಿಕ್ಕಿ ಎಂಬಾತ ಪರಾರಿಯಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ರಿತೇಶ್ ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಮದ್ಯದ ಅಮಲಿನಲ್ಲಿ ಆರಂಭವಾದ ಜಗಳದಿಂದ ಘಟನೆ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : May 26, 2019, 2:17 PM IST