ಕರ್ನಾಟಕ

karnataka

ETV Bharat / city

ವಿವಾದಿತ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಕಾಮಗಾರಿ ತಡೆಗೆ ನಗರಾಭಿವೃದ್ಧಿ ಸಚಿವರ ಸೂಚನೆ

ವಿವಾದಕ್ಕೆ ಕಾರಣವಾಗಿದ್ದ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಕಾಮಗಾರಿ ತಡೆ ಹಿಡಿಯುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸೂಚಿಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

By

Published : Feb 29, 2020, 8:24 PM IST

Urban Development Minister
ಭೈರತಿ ಬಸವರಾಜ್ ಸೂಚನೆ

ಮಂಗಳೂರು: ಕಳೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಕಾರಣವಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಕಾಮಗಾರಿ ತಡೆಹಿಡಿಯುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸೂಚಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕುದ್ರೋಳಿಯಲ್ಲಿ ಕಸಾಯಿಖಾನೆ ಅಭಿವೃದ್ಧಿ ಕಾಮಗಾರಿ ತಡೆಹಿಡಿಯಬೇಕು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಸಾರ್ವಜನಿಕರಿಂದ ಬಂದಿರುವ ಆಕ್ಷೇಪದ ಹಿನ್ನೆಲೆಯಲ್ಲಿ ಕಾಮಗಾರಿ ತಡೆಹಿಡಿಯಲು ಸೂಚಿಸಿದ ಅವರು, ಇದಕ್ಕಾಗಿ ಬೇರೆ ಸ್ಥಳ ಗುರುತಿಸಲಾಗುವುದು ಎಂದು ತಿಳಿಸಿದರು.

ಭೈರತಿ ಬಸವರಾಜ್ ಸೂಚನೆ

ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್, ಉಪಮೇಯರ್ ವೇದಾವತಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

ABOUT THE AUTHOR

...view details