ಮಂಗಳೂರು: ಬೆಂಗಳೂರಿನಲ್ಲಿ ಫ್ಲೈಓವರ್ಗೆ ವೀರ ಸಾವರ್ಕರ್ ನಾಮಕರಣ ಮಾಡುವ ವಿಚಾರದಲ್ಲಿ ವಿವಾದವುಂಟಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಇದೀಗ ನಗರದ ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡುವ ಹಾಗೂ ಪುತ್ಥಳಿ ಪ್ರತಿಷ್ಠಾಪನೆ ಮಾಡುವ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪರ -ವಿರೋಧ ಚರ್ಚೆಗಳು ಕೇಳಿ ನಡೆಯುತ್ತಿವೆ.
ವಿಶೇಷವೆಂದರೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿಯವರೇ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ವೀರ ಸಾವರ್ಕರ್ ನಾಮಕರಣ ಮಾಡಲು ಹಾಗೂ ಪುತ್ಥಳಿ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿ ಮಂಗಳೂರು ಮನಪಾ ಮೇಯರ್ಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಚರ್ಚೆಗೂ ಬಂದಿದ್ದು, ಆಗ ವಿಪಕ್ಷ ಸದಸ್ಯರು ಸಾವರ್ಕರ್ ಹೆಸರನ್ನು ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ಇಡುವುದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು.