ಬೆಳ್ತಂಗಡಿ(ದಕ್ಷಿಣಕನ್ನಡ):ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ರಾಜ್ಯದಿಂದ ಐವರಿಗೆ ಆಹ್ವಾನ ನೀಡಲಾಗಿದೆ. ಈ ಐವರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೂ ಒಬ್ಬರಾಗಿದ್ದಾರೆ.
ಶ್ರೀರಾಮ ಮಂದಿರ ಭೂಮಿ ಪೂಜೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ - ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ
ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ.
![ಶ್ರೀರಾಮ ಮಂದಿರ ಭೂಮಿ ಪೂಜೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ Veerendra Hegde invited to the land worship of Srirama Mandir](https://etvbharatimages.akamaized.net/etvbharat/prod-images/768-512-8283867-397-8283867-1596477146593.jpg)
ಶ್ರೀರಾಮ ಮಂದಿರ ಭೂಮಿ ಪೂಜೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ
ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿ ಶಿಲಾನ್ಯಾಸ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಎಲ್.ಕೆ.ಅಡ್ವಾಣಿ ಸೇರಿದಂತೆ 175 ಪ್ರಮುಖರು ಮಾತ್ರ ಭಾಗಿಯಾಗಲಿದ್ದಾರೆ.
ಈಗಾಗಲೇ ಎಲ್ಲರಿಗೂ ಆಮಂತ್ರಣ ಪತ್ರಿಕೆ ರವಾನೆ ಮಾಡಲಾಗಿದ್ದು, ಧರ್ಮಾಧಿಕಾರಿಗಳಿಗೆ ಆಹ್ವಾನ ಪತ್ರ ಬಂದಿರುವುದು ತಾಲೂಕಿನ ಜನತೆಯಲ್ಲಿ ಸಂತಸ ಮೂಡಿಸಿದೆ. ಅದಲ್ಲದೆ, ಈಗಾಗಲೇ ಧರ್ಮಸ್ಥಳ ನೇತ್ರಾವತಿಯ ತೀರ್ಥ ಹಾಗೂ ಧರ್ಮಸ್ಥಳದ ಮೃತ್ತಿಕೆ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ.