ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ 'ಮತದಾನ ಮಾಡ ಬನ್ನಿ' ಮತದಾನ ಜಾಗೃತಿ ಜಾಥಾಕ್ಕೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಚಾಲನೆ ನೀಡಿದರು.
ಮಂಗಳೂರಿನಲ್ಲಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ - ದ.ಕ. ಜಿಲ್ಲಾ ಸ್ವೀಪ್ ಸಮಿತಿ
ಲೋಕಸಭಾ ಚುನಾವಣೆಯ ಹಿನ್ನೆಲೆ ದ.ಕ. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ 'ಮತದಾನ ಮಾಡ ಬನ್ನಿ' ಮತದಾನ ಜಾಗೃತಿ ಜಾಥಾಕ್ಕೆ ಮಂಗಳೂರಿನಲ್ಲಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಚಾಲನೆ ನೀಡಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಈ ಜಾಗೃತಿ ಜಾಥಾ ವಾಹನ, ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಿದೆ.
ಈ ಬಗ್ಗೆ ಮಾತನಾಡಿದ ಸ್ವೀಪ್ ಸಮಿತಿಯ ಅಧ್ಯಕ್ಷ ಡಾ. ಸೆಲ್ವಮಣಿ, ವಾಹನ ಜಾಗೃತಿ ಜಾಥಾದ ಮೂಲ ಉದ್ದೇಶ ಪ್ರತಿಯೊಬ್ಬರಿಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು. ಅಲ್ಲದೆ ಎಲ್ಲರೂ ವೋಟರ್ ಐಡಿ ಹೊಂದಬೇಕು ಎಂದು ಮನವರಿಕೆ ಮಾಡಲಾಗುತ್ತದೆ. ಚುನಾವಣೆ ಸಂಬಂಧಿ ಮತದಾರರ ಸಂಶಯ ನಿವಾರಣೆಗೆ ಈಗಾಗಲೇ 1950 ಟೋಲ್ ಫ್ರೀ ಸಂಖ್ಯೆಯನ್ನು ನೀಡಲಾಗಿದ್ದು, ಈ ಬಗ್ಗೆಯೂ ಜನರಿಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಅಲ್ಲದೆ ನಾಗರಿಕರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕನ್ನಡ ಮತ್ತು ತುಳು ಭಾಷೆಯಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.