ಸುಳ್ಯ(ದಕ್ಷಿಣ ಕನ್ನಡ) :ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಅವರ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹಲವು ಕೊಲೆಗಳು ನಡೆದಾಗ ಕಠಿಣ ಕ್ರಮ ಕೈಗೊಳ್ಳುವಲ್ಲಿ ನಮ್ಮ ಸರ್ಕಾರ ಎಡವಿದೆ ಎಂದು ಪ್ರಾಮಾಣಿಕವಾಗಿ ಹೇಳುತ್ತೇನೆ. ಪೊಲೀಸರಿಗೆ ಪ್ರವೀಣ್ ಅವರು ತನಗೆ ಬೆದರಿಕೆ ಇರುವ ಬಗ್ಗೆ ಹೇಳಿದ್ದಾರೆ ಎನ್ನಲಾಗ್ತಿದೆ. ಅದು ನಿಜವೇ ಆಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು ಎಂದರು.