ಕರ್ನಾಟಕ

karnataka

ETV Bharat / city

ಕಡಬ, ಸುಳ್ಯ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ: ಹಲವು ಕಡೆ ವಿದ್ಯುತ್ ಪೂರೈಕೆ ಸ್ಥಗಿತ

ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ಹಲವಾರು ಕಡೆಗಳಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದ ವಿದ್ಯುತ್​ನಲ್ಲಿ ವ್ಯತ್ಯಯ ಉಂಟಾಗಿದೆ.

ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆ
ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆ

By

Published : Feb 22, 2021, 10:28 PM IST

ಸುಬ್ರಹ್ಮಣ್ಯ:ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಸಹಿತ ಮಳೆಯಾದ ಪರಿಣಾಮ, ಉಪ್ಪಿನಂಗಡಿ,ಕಡಬ,ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್​ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದಿತ್ತು.

ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆ

ಇದರ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳಕ್ಕೆ ಮೆಸ್ಕಾಂ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಅಗಮಿಸಿ ಸ್ಥಳೀಯರ ಸಹಕಾರದೊಂದಿಗೆ ತುರ್ತು ಕಾರ್ಯಚರಣೆ ನಡೆಸಿ ಮರವನ್ನು ತೆರವುಗೊಳಿದರು.

ಓದಿ:ಮರಳು ಟಿಪ್ಪರ್ ಪಲ್ಟಿ.. ಪಾದಚಾರಿ ಮಹಿಳೆ ಪವಾಡ ಸದೃಶ ಪಾರು

ಹಲವಾರು ಕಡೆಗಳಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕಡಬ, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಈಗಲೂ ಗಾಳಿ ಸಹಿತ ಮಳೆ ಸುರಿಯುತ್ತಿದೆ.

ABOUT THE AUTHOR

...view details