ಮಂಗಳೂರು: ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಒಳ ಉಡುಪಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಸಾಗಾಟ: ಮಹಿಳೆ ಅರೆಸ್ಟ್ - Woman Arrested for shipping Gold in Underwear
ಒಳ ಉಡುಪು ಮತ್ತು ಸಾಕ್ಸ್ನಲ್ಲಿ 2.41 ಕೆ.ಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
Gold
ಕಾಸರಗೋಡಿನ ಸಮೀರಾ ಬಂಧಿತ ಮಹಿಳೆ. ಸಮೀರಾ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಈಕೆಯನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಮತ್ತು ಸಾಕ್ಸ್ನಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಪ್ರಯಾಣ ಮಾಡಿರುವುದು ಪತ್ತೆಯಾಗಿದೆ.
ಬಂಧಿತ ಮಹಿಳೆಯಿಂದ 1 ಕೋಟಿ 10 ಲಕ್ಷ ರೂ. ಮೌಲ್ಯದ 2.41 ಕೆ.ಜಿ ಚಿನ್ನ ಹಾಗೂ ವಿದೇಶಿ ಸಿಗರೇಟುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೋಪ್ಟಾ ಕಾಯ್ದೆ ಉಲ್ಲಂಘನೆ ಪ್ರಕರಣವನ್ನು ದಾಖಲಿಸಲಾಗಿದೆ.