ಕರ್ನಾಟಕ

karnataka

ETV Bharat / city

ಯಮಸ್ವರೂಪಿಯಾಗಿ ಬಂದ ಟಿಪ್ಪರ್​​: ಮಂಗಳೂರಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿ - ರಸ್ತೆ ಅಪಘಾತದಲ್ಲಿ ಮಹಿಳೆ ಸಾವು

ಟಿಪ್ಪರ್​​ವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಡೆದಿದೆ.

ರಸ್ತೆ ಅಪಘಾತಕ್ಕೆ ಮಹಿಳೆ ಬಲಿ
ರಸ್ತೆ ಅಪಘಾತಕ್ಕೆ ಮಹಿಳೆ ಬಲಿ

By

Published : Nov 27, 2019, 6:46 PM IST

ಮಂಗಳೂರು: ಟಿಪ್ಪರ್​​ವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ನಗರದ ಕುಂಟಿಕಾನ ಬಳಿ ನಡೆದಿದೆ.

ನಗರದ ಕಾವೂರು ಸಮೀಪದ ವಿವೇಕನಗರ ನಿವಾಸಿ ಪ್ರಿಯಾ ಸುವರ್ಣ (42) ಮೃತಪಟ್ಟವರು. ಪ್ರಿಯಾ ಅವರು ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಯಿಂದ ನಗರದ ಕೆಪಿಟಿ ಕಡೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತೀವ್ರವಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪಶ್ಚಿಮ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details