ಮಂಗಳೂರು: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ವುಮೆನ್ಸ್ ಇಂಡಿಯಾ ಮೂವ್ಮೆಂಟ್ ಸದಸ್ಯರು ಮಂಗಳೂರಿನ ಮಿನಿವಿಧಾನ ಸೌಧದ ಮುಂಭಾಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವುಮೆನ್ಸ್ ಇಂಡಿಯಾ ಮೂವ್ಮೆಂಟ್ನ ದ.ಕ. ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮಾತನಾಡಿ, ಉತ್ತರ ಪ್ರದೇಶದಲ್ಲಿ ಹೆಣ್ಣಿನ ಮೇಲೆ ನಿರಂತರವಾಗಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿದ್ದು, ಕೆಲವೊಂದು ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿದೆ. ಇಂದು ನಮ್ಮನ್ನಾಳುವ ಸರಕಾರಕ್ಕೆ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ.