ಕರ್ನಾಟಕ

karnataka

ETV Bharat / city

ಶ್ರೀಲಂಕಾದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು: ಮಂಗಳೂರಿಗೆ ಕರಾವಳಿ ಕಾವಲು ಪಡೆ ಎಚ್ಚರಿಕೆ - ಕರಾವಳಿ ಕಾವಲು ಪೊಲೀಸ್ ಠಾಣೆ

ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು ಆಹಾರ, ವಿದ್ಯುತ್​, ಔಷಧ ಕೊರತೆಯಿಂದ ದೇಶದ ಪ್ರಜೆಗಳು ನಲುಗಿದ್ದಾರೆ. ದೇಶದಲ್ಲಿ ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದ್ದು, ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.

Coast Guard Police
Coast Guard Police

By

Published : May 12, 2022, 2:19 PM IST

ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ.

ಶ್ರೀಲಂಕಾ ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿರುವುದರಿಂದ ವಿದ್ಯುತ್​, ಔಷಧ, ಆಹಾರ ಪದಾರ್ಥಗಳಿಗಾಗಿ ಪರದಾಟ ನಡೆಯುತ್ತಿದೆ. ಅಲ್ಲಿನ ಜನರು ಕೊಲೆ, ದರೋಡೆ, ಕಲಹದಿಂದ ತತ್ತರಿಸಿದ್ದು, ಸಮುದ್ರ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸುವಂತೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ತಿಳಿಸಿದೆ.

ನೋಟಿಸ್ ನೀಡಿದ ಕರಾವಳಿ ಕಾವಲು ಪೊಲೀಸ್ ಠಾಣೆ

ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಮಯದಲ್ಲಿ ಅವರುಗಳ ಪೂರ್ವಾಪರ ಮಾಹಿತಿ ತಿಳಿದು, ಸೂಕ್ತ ದಾಖಲೆಯನ್ನು ಪಡೆದು ಕೂಡಲೇ ಪೊಲೀಸ್ ಠಾಣೆಗೆ‌ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಜೊತೆಗೆ ಕರಾವಳಿ ಪೊಲೀಸ್ ಠಾಣೆಯು ಮಂಗಳೂರಿನ ಮೀನುಗಾರರು,‌ ರಿಕ್ಷಾ ಚಾಲಕರು ಸೇರಿದಂತೆ ವಿವಿಧೆಡೆ ಎಚ್ಚರಿಕೆಯ ನೋಟಿಸ್ ನೀಡಿದೆ‌.

ಇದನ್ನೂ ಓದಿ:ಒಬಿಸಿ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಬೊಮ್ಮಾಯಿ

ABOUT THE AUTHOR

...view details