ಮಂಗಳೂರು:ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಅಪ್ರಾಪ್ತೆ ಹಾಗೂ ಯುವಕನೋರ್ವ ನಕಲಿ ಪಾಸ್ ಬಳಸಿ ರೂಮ್ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯು ತರಿಕೇರಿ ಮೂಲದವಳಾಗಿದ್ದು, ನಗರದ ಕಾಲೇಜೊಂದರಲ್ಲಿ ಓದುತ್ತಿದ್ದಾಳೆ. ಯುವಕ ಕುದ್ರೋಳಿ ನಿವಾಸಿಯಾಗಿದ್ದಾನೆ.
ಮಂಗಳೂರು: ವಸತಿಗೃಹವೊಂದರಲ್ಲಿ ಅಪ್ರಾಪ್ತೆ, ಯುವಕ ಪತ್ತೆ
ಮಂಗಳೂರಿನ ವಸತಿಗೃಹವೊಂದರಲ್ಲಿ ಅಪ್ರಾಪ್ತೆ ಹಾಗೂ ಯುವಕನೋರ್ವ ನಕಲಿ ಪಾಸ್ ಬಳಸಿ ರೂಮ್ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಸತಿಗೃಹವೊಂದರಲ್ಲಿ ಅಪ್ರಾಪ್ತೆ, ಯುವಕ ಪತ್ತೆ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ಘೋಷಣೆಯಾಗಿದ್ದರೂ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಯುವಕ ಲಾಡ್ಜ್ನಲ್ಲಿ ರೂಮ್ ಮಾಡಿರುವ ಬಗ್ಗೆ ಬಂದರು ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ಪ್ರತ್ಯೇಕ ರೂಮ್ನಲ್ಲಿದ್ದರೆಂದು ತಿಳಿದುಬಂದಿದೆ. ಇವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ರೇಖಾ ಕದಿರೇಶ್ ಕೊಲೆ ಪ್ರಕರಣ : ನಾದಿನಿ, ಆಕೆಯ ಮಗನ ಬಂಧನ