ಮೈಸೂರು :ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇಧಿಸಿ ನಗರದಲ್ಲಿ ಇಂದು 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ಮೈಸೂರು ನಗರದಲ್ಲಿ ಇಂದು ನಿಷೇಧಾಜ್ಞೆ ಜಾರಿ - ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಆದೇಶ
ಈ ಆದೇಶ ಉಲ್ಲಂಘಿಸಿ ಯಾವುದೇ ಸಂಘಟನೆಯವರು ಪ್ರತಿಭಟನೆ ನಡೆಸಲು ಮುಂದಾದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ..
ಮೈಸೂರು ನಗರದಲ್ಲಿ ಇಂದು ನಿಷೇಧಾಜ್ಞೆ
ಇಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಎಲ್ಲಾ ರೀತಿಯ ಮೆರವಣಿಗೆ ಹಾಗೂ ಪ್ರತಿಭಟನೆಗಳಿಗೆ ನಿರ್ಬಂಧ ಹೇರಲಾಗಿದೆ.
ಈ ಆದೇಶ ಉಲ್ಲಂಘಿಸಿ ಯಾವುದೇ ಸಂಘಟನೆಯವರು ಪ್ರತಿಭಟನೆ ನಡೆಸಲು ಮುಂದಾದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.