ಮೈಸೂರು: ಜಿಲ್ಲೆಯಲ್ಲಿ ಇಂದು 430 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದರೆ, 9 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ 70 ಮಂದಿ ಚೇತರಿಸಿಕೊಂಡು ಬಿಡುಗಡೆ ಆಗಿದ್ದಾರೆ.
ಮೈಸೂರಲ್ಲಿ 430 ಮಂದಿಗೆ ಸೋಂಕು: ಕಿಲ್ಲರ್ ಕೊರೊನಾಗೆ 9 ಮಂದಿ ಬಲಿ - ಕಿಲ್ಲರ್ ಕೊರೊನಾ
ಮೈಸೂರು ಜಿಲ್ಲೆಯಲ್ಲಿ 430 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,013ಕ್ಕೆ ಏರಿದೆ. ಇಂದು 9 ಮಂದಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ನಾಲ್ಕು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4,013ಕ್ಕೆ ಏರಿದೆ. ಈವರೆಗೆ ಜಿಲ್ಲೆಯಲ್ಲಿ 1,215 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,661 ಸಕ್ರಿಯ ಪ್ರಕರಣಗಳಿದ್ದು, 137 ಮಂದಿ ಮೃತಪಟ್ಟಿದ್ದಾರೆ.
ಸೋಂಕಿತರ ಪತ್ತೆಗಾಗಿ ಎನ್.ಆರ್. ಕ್ಷೇತ್ರ, ಚಾಮರಾಜ ಕ್ಷೇತ್ರದ ಕೆಲವು ಭಾಗಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.