ಮೈಸೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ರಸ್ತೆಗೆ ಬಂದಿದ್ದ ಬೈಕ್ ಸವಾರನನ್ನು ತಡೆದಿದ್ದಕ್ಕೆ ಪೊಲೀಸರ ವಿರುದ್ಧವೇ ಬೈಕ್ ಸವಾರ ತಿರುಗಿ ಬಿದ್ದಿರುವ ಘಟನೆ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಆವಾಜ್ ಹಾಕಿದ ಬೈಕ್ ಸವಾರ: ತಕ್ಕ ಪಾಠ ಕಲಿಸಿದ ಪೊಲೀಸರು - ಲಾಕ್ಡೌನ್ ನಿಯಮ ಉಲ್ಲಂಘಿಸಿದ ಬೈಕ್ ಸವಾರ
ಕೊರೊನಾ ಸೋಂಕು ದಿನೇ ದಿನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಬೈಕ್ ಸವಾರನೊಬ್ಬ ಲಾಕ್ಡೌನ್ ನಿಯಮ ಉಲ್ಲಂಘಿಸಿ ಪೊಲೀಸರಿಗೆ ಆವಾಜ್ ಹಾಕಿದ್ದಾನೆ.

ಪೊಲೀಸರಿಗೆ ಅವಾಜ್ ಹಾಕಿದ ಸವಾರ
ಪೊಲೀಸರಿಗೆ ಆವಾಜ್ ಹಾಕಿದ ಸವಾರ
ಕೊರೊನಾ ಸೋಂಕು ದಿನೇ ದಿನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಸಾಕಷ್ಟು ಶ್ರಮ ಹಾಕಿ, ಸಾರ್ವಜನಿಕರ ಪ್ರಾಣ ಉಳಿಸಲು ತಮ್ಮ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಬೆಂಬಲ ನೀಡದ ಕೆಲವರು ಬೀದಿ ಸುತ್ತುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಬೈಕ್ ಸವಾರ, ಪೊಲೀಸರ ವಿರುದ್ಧವೇ ತಿರುಗಿ ಬಿದ್ದು ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಪೊಲೀಸರು, ಬೈಕ್ ಸೀಜ್ ಮಾಡಿ ತಕ್ಕ ಪಾಠ ಕಲಿಸಿದ್ದಾರೆ.