ಮೈಸೂರು:ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಾಗರಹೊಳೆಯಲ್ಲಿ ಮರಿಗಳೊಂದಿಗೆ ತಾಯಿ ಹುಲಿ ಚೆಲ್ಲಾಟ: ವಿಡಿಯೋ ವೈರಲ್ - undefined
ನಾಗರಹೊಳೆ ಅಭಯಾರಣ್ಯದಲ್ಲಿ ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯವನ್ನು ಸಫಾರಿಗೆ ಬಂದಿದ್ದ ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಆ ವಿಡಿಯೋ ಈಗ ಭಾರಿ ವೈರಲ್ ಆಗುತ್ತಿದೆ
ಮರಿಗಳೊಂದಿಗೆ ತಾಯಿ ಹುಲಿ ಚೆಲ್ಲಾಟ
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂತರಸಂತೆ ವಲಯದ ದಮ್ಮನಕಟ್ಟೆ ಸಫಾರಿ ಪ್ರದೇಶದಲ್ಲಿ ಅತಿ ಹೆಚ್ಚು ಜಿಂಕೆಗಳಿದ್ದು ಭೇಟೆಗಾಗಿ ಹುಲಿಗಳು ಹೆಚ್ಚಾಗಿ ಇಲ್ಲಿಗೆ ಬರುತ್ತವೆ. ನಿನ್ನೆ ವೀಕೆಂಡ್ ಎಂದು ಸಫಾರಿಗೆ ಬಂದಿದ್ದ ಪ್ರವಾಸಿಗರು ಸಖತ್ ಎಂಜಾಯ್ ಮಾಡಿದರು. ಇದೇ ವೇಳೆ ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.
ಇನ್ನು ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.