ಮೈಸೂರು: ಕೊರೊನಾ ಪರೀಕ್ಷೆಗೆ ಹೆದರಿ ವೃದ್ಧೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ.
ಕೊರೊನಾ ಅನುಮಾನ: ಬೆಂಕಿ ಹಚ್ಚಿಕೊಂಡು ವೃದ್ಧೆ ಆತ್ಮಹತ್ಯೆ - mysore news
ತನಗೆ ಕೊರೊನಾ ಬಂದಿರಬಹುದೆಂದು ತಮಗೆ ತಾವೇ ಅಂದುಕೊಂಡ ವೃದ್ಧೆ ಶನಿವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಗರದ ಮುನೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು , ಬಡಾವಣೆ ನಿವಾಸಿ ಮಹಾದೇವಮ್ಮ( 75 ) ಮೃತ ವೃದ್ಧೆ. ಇವರು ಆರೋಗ್ಯ ಸರಿಯಿಲ್ಲದ ಕಾರಣ ತಮ್ಮ ಬೀದಿಯ ಕ್ಲಿನಿಕ್ಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಚಿಕಿತ್ಸೆ ವೇಳೆ ಮಗದೊಮ್ಮೆ ಬರಬೇಕಾದರೆ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ವೃದ್ಧೆಗೆ ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನೆಲೆ ತನಗೆ ಕೊರೊನಾ ಬಂದಿರಬಹುದು ಎಂದು ತಮಗೆ ತಾವೇ ಅಂದುಕೊಂಡು ಶನಿವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ . ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .