ಮೈಸೂರು :ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದಿದ್ದ ಹೆಚ್ ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಇದೀಗ ಸೇವೆಯಿಂದ ವಜಾ ಮಾಡಲಾಗಿದೆ.
ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ ಆರ್ ಎಂ ಅನಿಲ್‌ಕುಮಾರ್ ಸೇವೆಯಿಂದ ವಜಾಗೊಂಡ ಶಿಕ್ಷಕ. ಶಾಲೆ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಜೊತೆ ಶಿಕ್ಷಕ ಅನಿಲ್‌ಕುಮಾರ್ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕೆಲ ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಳಿಕ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಹಾಗಾಗಿ, ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್ಕುಮಾರ್ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ.