ಮೈಸೂರು: ಬಿರುಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ವೃದ್ಧನೊಬ್ಬ ಗಾಯಾಗೊಂಡಿರುವ ಘಟನೆ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆ: ಮನೆ ಮೇಲೆ ಮರ ಬಿದ್ದು ವೃದ್ಧನಿಗೆ ಗಾಯ - ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ವೃದ್ಧನೊಬ್ಬ ಗಾಯಾಗೊಂಡಿರುವ ಘಟನೆ ನಡೆದಿದೆ.
![ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆ: ಮನೆ ಮೇಲೆ ಮರ ಬಿದ್ದು ವೃದ್ಧನಿಗೆ ಗಾಯ A tree falls on house and injures old man in mysore](https://etvbharatimages.akamaized.net/etvbharat/prod-images/768-512-7336147-666-7336147-1590386349507.jpg)
ಮೈಸೂರಿನಾದ್ಯಂತ ಬಿರುಗಾಳಿ ಸಹಿತ ಮಳೆ..ಮನೆ ಮೇಲೆ ಮರ ಬಿದ್ದು ವೃದ್ಧನಿಗೆ ಗಾಯ
ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ. ಅಲ್ಲದೆ ವಿದ್ಯುತ್ ಕಂಬಗಳು ಧರೆಗುರುಳಿವೆ.
ತಿಪ್ಪಲಾಪುರ ಗ್ರಾಮದ ಶಿವಯ್ಯ ಎಂಬುವವರ ಮನೆಯ ಮೇಲೆ ಮರ ಬಿದ್ದಿದ್ದು, ಗಾಯಗೊಂಡ ವೃದ್ಧ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.