ಮೈಸೂರು: ರಾಜ್ಯದ 75 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ನಗರದ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮನೆ ಹಾಗೂ ಅವರ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ರೈಲ್ವೆ ಕ್ವಾರ್ಟರ್ಸ್ ನಲ್ಲಿರುವ ಮನೆಯ ಮೇಲೆ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿರುವ ಅವರ ಮಾವ ಚಂದ್ರೇಗೌಡ ಅವರ ಮನೆಯ ಮೇಲೂ ಏಕ ಕಾಲದಲ್ಲಿ ದಾಳಿ ಮಾಡಲಾಗಿದ್ದು, ಅಲ್ಲಿಯೂ ಸಹ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.