ಮೈಸೂರು: ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಧಿಕೃತವಾಗಿ ನೇಮಕವಾಗಿದ್ದಾರೆ. ಬುಧವಾರ ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ ಅವರನ್ನು ಮೃಗಾಲಯದ ಪ್ರಾಧಿಕಾರವು ಅಧಿಕೃತವಾಗಿ ರಾಯಭಾರಿಯನ್ನಾಗಿ ಘೋಷಿಸಿದೆ.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ವೇಳೆ ಲಾಕ್ಡೌನ್ನಿಂದಾಗಿ ಮೃಗಾಲಯವನ್ನು ಬಂದ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮೃಗಾಲಯದ ಆದಾಯವು ಕಡಿಮೆಯಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಟ ದರ್ಶನ್ ಅವರು ಮೃಗಾಲಯದ ಪ್ರಾಣಿ, ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವಂತೆ ಕರೆ ನೀಡಿದ್ದರು. ಈ ಕರೆಯ ನಂತರ ಮೂರು ಕೋಟಿ ರೂ.ಗೂ ಅಧಿಕ ಮೊತ್ತ ಸಂಗ್ರಹವಾಗಿತ್ತು.