ಮೈಸೂರು: ಆ್ಯಂಬುಲೆನ್ಸ್ ಸಕಾಲಕ್ಕೆ ಸಿಕ್ಕಿದ್ದರೆ ಅಪ್ಪು ಬದುಕುತ್ತಿದ್ದರೇನೋ ಎಂಬ ಸ್ಥಿತಿ ಜನ ಸಾಮಾನ್ಯರಿಗೆ ಬರಬಾರದು ಎಂಬ ಉದ್ದೇಶದಿಂದ ಪುನೀತ್ ರಾಜ್ಕುಮಾರ ಹೆಸರಿನಲ್ಲಿ ಅಪ್ಪು ಎಕ್ಸ್ಪ್ರೆಸ್ ಎಂಬ ಆ್ಯಂಬುಲೆನ್ಸ್ ಅನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರಕಾಶ್ ರಾಜ್ ಫೌಂಡೇಷನ್ ನೀಡಲಿದೆ ಎಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ತಿಳಿಸಿದರು. ನಗರದ ಪಾರಂಪರಿಕ ಶತಮಾನ ಕಂಡ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್ಪ್ರೆಸ್ ಆ್ಯಂಬುಲೆನ್ಸ್ ನೀಡಿ ಪ್ರಕಾಶ್ ರಾಜ್ ನೀಡಿ ಮಾತನಾಡಿದರು.
ನಟ ಪ್ರಕಾಶ್ ರಾಜ್ಗೆ ಪುನೀತ್ ಸ್ಫೂರ್ತಿ:ಅಪ್ಪು ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅಪ್ಪು ಹೆಸರಿನಲ್ಲಿ ಉಚಿತ ಆ್ಯಂಬುಲೆನ್ಸ್ ನೀಡುವ ಕಾರ್ಯವನ್ನು ನಮ್ಮ ಫೌಂಡೇಶನ್ ಹಮ್ಮಿಕೊಂಡಿದೆ. ಈ ಕೆಲಸಕ್ಕೆ ಪುನೀತ್ ರಾಜಕುಮಾರ್ ಅವರ ಮಾನವೀಯತೆಯ ಕೆಲಸವೇ ಸ್ಫೂರ್ತಿಯಾಗಿದೆ ಎಂದು ನಟ ಹೇಳಿದರು.
ಪುನೀತ್ ಚಿಕ್ಕ ವಯಸ್ಸಿನಲ್ಲಿ ಮಾಡಿದ ಕೆಲಸ ದೊಡ್ಡದು. ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಆಸೆ ನಮ್ಮದು. ಆ ದೃಷ್ಟಿಯಿಂದ ಅವರು ನಮ್ಮಲ್ಲಿ ಜೀವಂತಾಗಿ ಇರಬೇಕಾದರೆ, ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ಸ್ಮರಿಸುತ್ತಾ ಕೂರದೇ ಅವುಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಆ ದೃಷ್ಟಿಯಿಂದ ಎಲ್ಲ ಜಿಲ್ಲೆಗಳಿಗೂ ಅಪ್ಪು ಎಕ್ಸ್ಪ್ರೆಸ್ ಆ್ಯಂಬುಲೆನ್ಸ್ ನೀಡಲು ಮುಂದಾಗಿದ್ದೇವೆ ಎಂದು ನಟ ಪ್ರಕಾಶ್ ರಾಜ್ ತಿಳಿಸಿದರು.