ಮೈಸೂರು: ನಟ ಪುನೀತ್ ರಾಜ್‌ಕುಮಾರ್ ನಿಧನ ಹಿನ್ನೆಲೆಯಲ್ಲಿ ಯದುವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಮೇರು ವ್ಯಕ್ತಿತ್ವದ ನಟರಾಗಿದ್ರು. ಅವರು ನಮ್ಮೆಲ್ಲರನ್ನೂ ಅಗಲಿದ್ದು ಅತೀವ ದುಃಖವನ್ನುಂಟು ಮಾಡಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ. ಅವರ ಕುಟುಂಬದವರಿಗೆ, ಸ್ನೇಹಿತರಿಗೆ, ಎಲ್ಲಾ ಕನ್ನಡ ಚಿತ್ರರಂಗದವರಿಗೆ ಹಾಗು ಅವರ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನ ದಯಪಾಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.