ಮೈಸೂರು: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇಂಜಿನಿಯರ್ ಓರ್ವ ಕೋವಿಡ್ಗೆ ಬಲಿಯಾಗಿರುವ ಘಟನೆ ನಗರದ ಆಲನಹಳ್ಳಿ ಬಡಾವಣೆಯಲ್ಲಿ ನಡೆದಿದೆ.
2 ತಿಂಗಳ ಹಿಂದೆ ಮದುವೆಯಾಗಿದ್ದ ಮೈಸೂರಿನ ಇಂಜಿನಿಯರ್ ಕೋವಿಡ್ಗೆ ಬಲಿ - 2 ತಿಂಗಳ ಹಿಂದೆ ಮದುವೆಯಾಗಿದ್ದ ಇಂಜಿನಿಯರ್ ಕೋವಿಡ್ಗೆ ಬಲಿ,
ಕೋವಿಡ್ನಿಂದ ಬಳಲುತ್ತಿದ್ದ ನಗರದ ಆಲನಹಳ್ಳಿ ಬಡಾವಣೆಯ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ (31), ಬುಧವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂಜಿನಿಯರ್ ಕೋವಿಡ್ಗೆ ಬಲಿ
ನಗರದ ಆಲನಹಳ್ಳಿ ಬಡಾವಣೆಯ ನಿವಾಸಿ ನವೀನ್ ಕುಮಾರ್ (31), ಬುಧವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಜೈನ್ ವಿವಿ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಮಾರ್ಚ್ ತಿಂಗಳಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿದ್ದ ಯುವತಿಯನ್ನು ಅದ್ಧೂರಿಯಾಗಿ ಮದುವೆಯಾಗಿದ್ದರು.
ಕಳೆದ ವಾರ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.