ಮೈಸೂರು: ಮಾಂಸಕ್ಕಾಗಿ ಅರಣ್ಯದೊಳಗೆ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರು ಬೇಟೆಗಾರರನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಧಿಸಲಾಗಿದೆ.
ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರ ಬಂಧನ - ಮೈಸೂರು
ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರು ಬೇಟೆಗಾರರನ್ನು ನಾಗರಹೊಳೆ ಅರಣ್ಯ ಪ್ರದೇಶದ ಬಳಿ ಬಂಧಿಸಲಾಗಿದೆ. ಬಂಧಿತರ ವಿರುದ್ಧ ವನ್ಯ ಪ್ರಾಣಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರ ಬಂಧನ
ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಆನೆಚೌಕೂರು ವಲಯದ ದೇವಮಾಚಿಯ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಹಮೀದ್, ಇಯಾದ್ ಹಾಗೂ ಶಾನೂ ಎಂಬ ಮೂವರು ಬೇಟೆಗಾರರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಬಂದೂಕು, ಎರಡು ಜೀವಂತ ಗುಂಡುಗಳು ಹಾಗೂ ಬೇಟೆಗೆ ಬಳಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ವನ್ಯ ಪ್ರಾಣಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಲಾಗಿದೆ.