ಮೈಸೂರು: ಕರ್ನಾಟಕ ಸರ್ಕಾರ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ಹಾಗೂ ರಾಜ್ಯದ ಜನರ ಹಿತ ಕಾಯಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿದೆ: ಅರುಣ್ ಸಿಂಗ್ ಅಭಯ - ಮೈಸೂರು ಅರುಣ್ ಸಿಂಗ್ ನ್ಯೂಸ್
ಕಾವೇರಿ ನೀರು ಹಾಗೂ ಮೇಕೆದಾಟು ಯೋಜನೆ ಬಗ್ಗೆ ರೈತರು ಹಾಗೂ ಜನರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭರವಸೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಬಿಡುವ ಹಾಗೂ ಮೇಕೆದಾಟು ಯೋಜನೆ ಬಗ್ಗೆ ರೈತರು ಹಾಗೂ ಜನರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಇದರ ಬಗ್ಗೆ ವಿಶ್ವಾಸ ಇಡಬೇಕು ಎಂದರು.
ಇನ್ನು ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನೀವೇ ಹೇಳಿ ಯಾರು ಕರ್ನಾಟಕಕ್ಕೆ ಬರಬಹುದು ಎಂದು ನಕ್ಕು ಹೊರಟರು.