ಮೈಸೂರು:ಭಾನುವಾರ ರಾತ್ರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿಯನ್ನ ಬಂಧಿಸಲಾಗಿದೆ.
ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಹಿಂಭಾಗವಿರುವ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಊಟ ಮಾಡಿ ನಂತರ ಸಮಾರಂಭದ ಹಾಲ್ಗೆ ಬಂದು ಸ್ನೇಹಿತರೊಂದಿಗೆ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಇದೇ ವೇಳೆ ಕೆಂಪು ಬಣ್ಣದ ಜಾಕೆಟ್ ಧರಿಸಿದ್ದ ಯುವಕನೋರ್ವ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ನಿಧಾನವಾಗಿ ಬಂದು ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಶಾಸಕರ ಮೇಲೆ ಮಚ್ಚಿನಿಂದ ಏಕಾಏಕಿ ಹಲ್ಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದ. ಆದರೆ ಕಾರ್ಯಕ್ರಮದಲ್ಲಿದ್ದವರು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.