ಅಯ್ಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟೆಚ್ಚರ ವಹಿಸಲಾಗಿದೆ.
ದಕ್ಷಿಣ ಕನ್ನಡ:ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆಗಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ವಿಶೇಷವಾದ ಟಿಕೆಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆ ತೀರ್ಪು ಹಿನ್ನೆಲೆ: ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೈ ಅಲರ್ಟ್ ಅಂತರ್ ರಾಜ್ಯ ಗಡಿ ಭಾಗಗಳಲ್ಲಿ ಸೀಲ್ ಮಾಡಿ ಪೊಲೀಸರು ವಿಶೇಷ ತಪಾಸಣೆ ನಡೆಸುತ್ತಿದ್ದಾರೆ. 15 ಮಂದಿ ಇನ್ಸ್‌ಪೆಕ್ಟರ್, 40 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 100 ಮಂದಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ಗಳು, 5 ಕೆಎಸ್ಆರ್ಪಿ ತುಕಡಿ, 1 ಕೇಂದ್ರೀಯ ಅರೆ ಸೇನಾಪಡೆ, ಇಬ್ಬರು ಡಿಸಿಪಿಗಳನ್ನ ನಿಯೋಜಿಸಲಾಗಿದೆ.
ಮೈಸೂರು:ಅಯೋಧ್ಯೆ ತೀರ್ಪಿನ ಹಿನ್ನೆಲೆ ಸಾಂಸ್ಕೃತಿಕ ನಗರಿಯ ಪ್ರಮುಖ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ನಗರದ ಪ್ರಮುಖ ಜನನಿಬಿಡ ಸ್ಥಳ, ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ 3000ಕ್ಕೂ ಅಧಿಕ ಪೋಲಿಸರನ್ನು ನಿಯೋಜನೆ ಮಾಡಲಾಗಿದೆ. 144 ಸೆಕ್ಷನ್ ಅನ್ವಯ ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿಜಯೋತ್ಸವ ಹಾಗೂ ಪ್ರತಿಭಟನೆ ನಿಷೇಧ ಮಾಡಲಾಗಿದೆ.
ಕೊಡಗು:ಅಯೋಧ್ಯೆ ತೀರ್ಪಿನ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಿ, ಎಲ್ಲೆಡೆ ಖಾಕಿ ಕಣ್ಗಾವಲು ಹಾಕಲಾಗಿದೆ.