ಮೈಸೂರು :ಪ್ರತಿ ದಿನ ಒಂದೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣ ವಿಚಾರದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸರ್ಕಾರ ತನಿಖೆಯನ್ನು ಸರಿಯಾಗಿ ಮಾಡಬೇಕು, ತನಿಖೆಯನ್ನು ಕೇವಲ ಕಲಬುರ್ಗಿಗೆ ಮಾತ್ರ ಸೀಮಿತ ಮಾಡಬಾರದು ಎಂದಿದ್ದಾರೆ.
ಪಿಎಸ್ಐ ಹಗರಣದಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗ ಶಾಮೀಲಾಗಿದೆ. ಇದರ ಜೊತೆಗೆ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ಹಗರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಬೇಕೆಂದು ಹೆಚ್.ವಿಶ್ವನಾಥ್ ಹೇಳಿದರು.
ಸಂತೋಷ್ ಜಿ ಹೇಳಿಕೆ ಸರಿ ಇದೆ :ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ ಹೊಸ ಹೊಸ ಮುಖಗಳಿಗೆ ಮಣೆ ಹಾಕ್ತೀವಿ ಎಂಬ ಬಿ ಎಲ್ ಸಂತೋಷ್ ಹೇಳಿಕೆ ಸರಿ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆಯೇ ಈ ರೀತಿ ಹೇಳಿಕೆ ನೀಡಿದ್ದರು. ಅದನ್ನೇ ಸಂತೋಷ್ ಹೇಳಿದ್ದಾರೆ ಎಂದು ವಿಶ್ವನಾಥ್ ಹೇಳಿದರು.