ಮೈಸೂರು: ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ ಬಳ್ಳಾರಿಯಲ್ಲಿ ನೀಡಿರುವ 3,666 ಎಕರೆ ಪ್ರದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವಮೋರ್ಚಾದಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಮೈಸೂರಲ್ಲೂ ಬಿಜೆಪಿ ಪ್ರತಿಭಟನೆ: ಜಿಂದಾಲ್ಗೆ ನೀಡಿದ ಭೂಮಿ ಹಿಂಪಡೆಯಲು ಒತ್ತಾಯ - undefined
ರಾಜ್ಯ ಸರ್ಕಾರ ಬಳ್ಳಾರಿಯಲ್ಲಿ ಜಿಂದಾಲ್ ಕಂಪನಿಗೆ ನೀಡಿರುವ ಭೂಮಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ
ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ, ಆದರೆ, ಯಾವುದೇ ಅಭಿವೃದ್ಧಿ ಮಾಡದೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಲ್ಲದೇ ಜಿಂದಾಲ್ ಕಂಪನಿಗೆ 3,666 ಎಕರೆ ಪ್ರದೇಶ ನೀಡಿ, ರಾಜ್ಯ ಖಜಾನೆ ಲೂಟಿ ಮಾಡಲು ಕೆಲವು ರಾಜಕಾರಣಿಗಳು ನಿಂತಿದ್ದಾರೆ ಎಂದು ಆರೋಪಿಸಿದರು.
ಜಿಂದಾಲ್ ಕಂಪನಿಗೆ ನೀಡಿರುವ ಭೂಮಿ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.