ಕರ್ನಾಟಕ

karnataka

ETV Bharat / city

ಮೈಸೂರು ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ: ಸಚಿವ ಸೋಮಶೇಖರ್ - ಮೈಸೂರು ಮಹಾನಗರ ಪಾಲಿಕೆ

ಇಂದು ನಡೆಯುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಸ್.ಟಿ‌.ಸೋಮಶೇಖರ್
ಎಸ್.ಟಿ‌.ಸೋಮಶೇಖರ್

By

Published : Feb 24, 2021, 12:05 PM IST

Updated : Feb 24, 2021, 12:12 PM IST

ಮೈಸೂರು: ಈಗಾಗಲೇ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ನಮ್ಮ ಪಕ್ಷಕ್ಕೆ ಬೆಂಬಲ ಸೂಚಿಸಲು ಮುಂದಾಗಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್

ಹೂಟಗಳ್ಳಿಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಪಡೆಯಲು ಮುಂದಾಗಿದೆ. ಇಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಲಿದೆ. ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಹೆಚ್ಚಿನ ಅನುದಾನ ದೊರೆತು ನಗರ ಪ್ರದೇಶಗಳು ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಜೆಡಿಎಸ್ ಬೆಂಬಲ ಕೇಳಿದ್ದಿವಿ ಎಂದು ಸಚಿವ ಸೋಮಶೇಖರ್​ ಹೇಳಿದರು.

Last Updated : Feb 24, 2021, 12:12 PM IST

ABOUT THE AUTHOR

...view details