ಮೈಸೂರು:ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ವೀರನಹೊಸಹಳ್ಳಿಯಲ್ಲಿ ನಡೆದಿದೆ.
ಬಸ್-ಬೈಕ್ ನಡುವೆ ಡಿಕ್ಕಿ: ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು - ತಕ್ಷಣ ಅಪೋಲೋ ಆಸ್ಪತ್ರೆಗೆ ಸೇರಿಸಿದರೂ
ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ವೀರನಹೊಸಹಳ್ಳಿಯಲ್ಲಿ ನಡೆದಿದೆ.
![ಬಸ್-ಬೈಕ್ ನಡುವೆ ಡಿಕ್ಕಿ: ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು KN_MYS_1_ACCIDENT_NEWS_7208092](https://etvbharatimages.akamaized.net/etvbharat/prod-images/768-512-5822114-thumbnail-3x2-smk---copy.jpg)
ಬಸ್-ಬೈಕ್ ನಡುವೆ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಫಾರೆಸ್ಟ್ ಗಾರ್ಡ್ ಸಾವು
ಕಳೆದ ಶುಕ್ರವಾರ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವಲಯದಲ್ಲಿ ಅರಣ್ಯ ರಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್ ಮೃತ ಗಾರ್ಡ್. ಕಾಡ್ಗಿಚ್ಚಿನ ಬಗ್ಗೆ ಕಾರ್ಯಾಗಾರದಲ್ಲಿ ಭಾಗವಹಿಸುವುದಕ್ಕೆ ತಮ್ಮ ವಸತಿ ಗೃಹದಿಂದ ವೀರನಹೊಸಹಳ್ಳಿ ಅರಣ್ಯ ಕಚೇರಿಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಬಸ್ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅಪೊಲೋ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.