ಮೈಸೂರು:ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಂಡು ಪೋಷಿಸುತ್ತಿರುವ ಹಾಗೂ ಪ್ರಾಣಿಗಳನ್ನು ದತ್ತು ಪಡಯುವಂತೆ ಕರೆ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಾಣಿ ಪ್ರಿಯರು ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯಬೇಕು ಮತ್ತು ಈ ಉದ್ದೇಶಕ್ಕಾಗಿ ಹೆಚ್ಚಿನ ನೆರವು ನೀಡಬೇಕು ಎಂದು ಸಚಿವರು ಸಹ ಮನವಿ ಮಾಡಿದ್ದಾರೆ.
(ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಚಾಲೆಂಜಿಂಗ್ ಸ್ಟಾರ್ ಮನವಿ.. ವಿಡಿಯೋ)