ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಕಾರು ಉರುಳಿರುವ ಘಟನೆ ಮೈಸೂರು-ಬೆಂಗಳೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು - ದಂಡಿಮಾರಮ್ಮ ದೇವಸ್ಥಾನ
ಈ ಕುರಿತು ಸ್ಥಳಕ್ಕೆ ಎನ್ ಆರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಮತ್ತು ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ತೆಗೆಯಲಾಗಿದೆ..
ಚರಂಡಿಗೆ ಉರುಳಿದ ಕಾರು
ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ನಂಜನಗೂಡಿನಿಂದ ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದಾಗ ದಂಡಿಮಾರಮ್ಮ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ದೊಡ್ಡ ಮೋರಿಗೆ ಉರುಳಿ ಬಿದ್ದಿದೆ. ಘಟನೆಯಿಂದ ಮಹಿಳೆಯೋರ್ವರಿಗೆ ಗಾಯಗಳಾಗಿವೆ. ಅವರನ್ನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಕುರಿತು ಸ್ಥಳಕ್ಕೆ ಎನ್ ಆರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಮತ್ತು ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ತೆಗೆಯಲಾಗಿದೆ.
Last Updated : Jul 3, 2021, 4:40 PM IST