ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲಿನ ದಾಳಿ ಖಂಡಿಸಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ಘಟಕದಿಂದ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿಗೆ ಖಂಡನೆ: ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ - ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿಗೆ ಖಂಡನೆ: ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ cong activists protest](https://etvbharatimages.akamaized.net/etvbharat/prod-images/768-512-9068011-277-9068011-1601968539002.jpg)
ಶಿರಾ ಹಾಗೂ ಆರ್.ಆರ್. ನಗರದಲ್ಲಿ ನಡೆಯುತ್ತಿರುವ ಉಪಚುನಾವಣೆ ಸೋಲಿನ ಭಯದಿಂದ, ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ತಂತ್ರಗಾರಿಕೆ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿಯ ಸರ್ಕಾರಕ್ಕೆ ಜನತೆ ತಕ್ಕ ಉತ್ತರ ಕೊಡುತ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಪಕ್ಷಗಳ ಮುಖಂಡರನ್ನು ಮಣಿಸಲು ಕೇಂದ್ರ ಸರ್ಕಾರವು ಸಿಬಿಐ, ಇಡಿ, ಐಟಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇಂತಹ ಕೆಟ್ಟ ನಿರ್ಧಾರಗಳಿಂದ ದೇಶದ ಆಡಳಿತ ವ್ಯವಸ್ಥೆ ಕುಸಿಯುವಂತೆ ಮಾಡುತ್ತಿದೆ. ಆದರೆ, ಕಾಂಗ್ರೆಸ್ ನಾಯಕರು ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದರು.