ಕರ್ನಾಟಕ

karnataka

ETV Bharat / city

ದ.ಕನ್ನಡ ಜಿಲ್ಲೆಯ ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ - puc exam time table

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಗದಿಯಾಗಿದ್ದ ಪ್ರಥಮ ಪಿಯು ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

Changes in first PUC exam time table in daksina kannada district
ದಕ್ಷಿಣ ಕನ್ನಡ ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ

By

Published : Feb 15, 2022, 6:42 AM IST

ಮಂಗಳೂರು (ದಕ್ಷಿಣ ಕನ್ನಡ):ಎಸ್​ಎಸ್​ಎಲ್​ಸಿ ಪರೀಕ್ಷೆಯ ಜೊತೆಗೆ ನಡೆಸಲು ಸೂಚಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದ‌ಕ್ಷಿಣ ಕನ್ನಡ ಜಿಲ್ಲಾ ಪಿಯು ಬೋರ್ಡ್ ಬದಲಾಯಿಸಿದೆ.

ಪ್ರಥಮ ಪಿಯು ಪರೀಕ್ಷೆಯನ್ನು ಎಸ್​ಎಸ್​ಎಲ್​ಸಿ ಪರೀಕ್ಷೆಯ ಜೊತೆಯಲ್ಲೇ ನಡೆಸುವಂತೆ ಜಿಲ್ಲಾ ಪಿಯು ಬೋರ್ಡ್​​ಗೆ ಸೂಚಿಸಲಾಗಿತ್ತು. ಹಾಗೆ ಪರೀಕ್ಷೆ ನಡೆಸುವುದಿದ್ದರೆ ಮಧ್ಯಾಹ್ನದ ಬಳಿಕ ನಡೆಸಬೇಕಾಗಿತ್ತು. ಇದರಿಂದ ಹಲವು ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುತ್ತಿದ್ದರು.

2,000ಕ್ಕೂ ಅಧಿಕ ಪ್ರಥಮ ಪಿಯು ವಿದ್ಯಾರ್ಥಿಗಳು ನೆರೆ ಜಿಲ್ಲೆಯ ಕಾಸರಗೋಡುವಿನಿಂದ ಪರೀಕ್ಷೆಗೆ ಬರಬೇಕಿತ್ತು‌‌. ಮಧ್ಯಾಹ್ನ 2.30ರಿಂದ 5.30ರವರೆಗೆ ಪರೀಕ್ಷೆ ನಡೆದರೆ ಕಾಸರಗೋಡು, ಸುಳ್ಯ ತಾಲೂಕಿನ ಗ್ರಾಮಾಂತರ ಭಾಗದಲ್ಲಿರುವ ವಿದ್ಯಾರ್ಥಿಗಳ ಸೇರಿ ಹಲವು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಸಿ ಮನೆ ಸೇರಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಂಶುಪಾಲರ ಸಂಘದವರು ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದರು.

ಇದನ್ನೂ ಓದಿ:50 ರೂಪಾಯಿ ಲಂಚ ಪಡೆದಿದ್ದಕ್ಕೆ ಕಡ್ಡಾಯ ನಿವೃತ್ತಿ ಶಿಕ್ಷೆ ಸರಿಯಲ್ಲ: ಹೈಕೋರ್ಟ್

ಇದೀಗ ಜಿಲ್ಲಾ ಪಿಯು ಇಲಾಖೆಯ ನಿರ್ದೇಶಕರು ಎಸ್​ಎಸ್​ಎಲ್​ಸಿ ಪರೀಕ್ಷೆಯ ವಿರಾಮದ ನಡುವೆ ಮಾರ್ಚ್ 29 ರಿಂದ ಏ.13ರ ವರೆಗೆ ಬೆಳಿಗ್ಗೆ 9.30 ರಿಂದ 12.45ರವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ರಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಪಿಯು ಪರೀಕ್ಷಾ ವೇಳಾಪಟ್ಟಿಯನ್ನು ಗಮನಿಸಿರುವ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇದೇ ರೀತಿಯಲ್ಲಿ ಪರೀಕ್ಷೆಯನ್ನು ಬೆಳಿಗ್ಗೆ ನಡೆಸಲು ಚಿಂತಿಸಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details